ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕವೇ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸಂಯುಕ್ತಾ ಹೆಗ್ಡೆ ಈಗಾಗಲೇ ತಮಿಳಿನಲ್ಲಿ ಅಭಿನಯಿಸುತ್ತಿದ್ದಾರೆ. ಈಗ ಮತ್ತೊಬ್ಬ ತಮಿಳು ನಟನ ಜೊತೆ ಅಭಿನಯಿಸುವ ಅವಕಾಶ ದೊರೆತಿದೆ.ತಮಿಳು ನಟ ಜಯಂ ರವಿ ಜೊತೆ ಈಗ ಸಂಯುಕ್ತಾ ಹೆಗ್ದೆ ಅಭಿನಯಿಸಲಿದ್ದಾರೆ. ಜಯಂ ರವಿ ಅವರು ಅಭಿನಯಿಸುತ್ತಿರುವ ಸಿನಿಮಾ ಕಾಮಿಡಿ ಎಂಟರ್ ಟೈನ್ ಮೆಂಟ್ ಕಥೆಯಾಗಿದ್ದು, ಈ ಸಿನಿಮಾದ ಪಾತ್ರವೊಂದಕ್ಕೆ ಸಂಯುಕ್ತಾ ಹೆಗ್ದೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಂಯುಕ್ತಾ ಅವರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.ಜಯಂ ರವಿ ಅವರ ಸಿನಿಮಾಗೆ ಈಗಾಗಲೇ ನಟಿ ಕಾಜಲ್ ಅಗರ್ ವಾಲ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಜಯಂ ರವಿ ಮತ್ತು ಕಾಜಲ್ ಇವರಿಬ್ಬರು ಒಟ್ಟಿಗೆ ಅಭಿನಯಿಸುತ್ತಿರುವ ಮೊದಲು ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಸಂಯುಕ್ತಾ ಕೂಡ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಈ ಸಿನಿಮಾವನ್ನು ಪ್ರದೀಪ್ ರಂಗನಾಥನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.ಸಂಯುಕ್ತಾ ಅಭಿನಯಿಸುತ್ತಿರುವ ತಮಿಳಿ ಎರಡನೇ ಸಿನಿಮಾವಾಗಿದೆ. ಈಗಾಗಲೇ ನಟ್ಟುದೇವ್ ಜೊತೆ ಸಂಯುಕ್ತಾ ಜೋಡಿಯಾಗಿ `ಪಪ್ಪಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ‘ಪಪ್ಪಿ’ ಚಿತ್ರದಲ್ಲಿ ಕಥೆ ಅದ್ಭುತವಾಗಿರುವ ಕಾರಣದಿಂದ ಈ ಸಿನಿಮಾದಲ್ಲಿ ನಟಿಸಲು ಒಪ್ಪಿರೋದಾಗಿ ಹೇಳಿಕೊಂಡಿದ್ದರು.
ತಮಿಳಿನಿಂದ ಸಾಲು ಸಾಲು ಅವಕಾಶಗಳು ಬರುತ್ತಿರುವುದರಿಂದ ಸಂಯುಕ್ತಾ ಖುಷಿಯ ಮೂಡಿನಲ್ಲಿದ್ದಾರೆ. ಸದ್ಯಕ್ಕೆ ಪಪ್ಪಿ ಸಿನಿಮಾದ ಶೂಟಿಂಗ್ ನಲ್ಲಿ ಸಂಯುಕ್ತಾ ಹೆಗ್ಡೆ ಬ್ಯುಸಿಯಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


