ಬೆಂಗಳೂರು: ತೆರೆಯ ಮೇಲೆ ಜನರನ್ನು ರಂಜಿಸಿ ಅದೆಷ್ಟೋ ಪಾತ್ರಕ್ಕೆ ಜೀವ ತುಂಬಿದ ಮೇರು ಕಲಾವಿದ ಸದಾಶಿವ ಬ್ರಹ್ಮಾವರ್(90) ವಿಧಿವಶರಾಗಿದ್ದಾರೆ.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ್ ಅವರು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಬ್ರಹ್ಮಾವರ್ ಸಾಯುವ ಮುನ್ನಾ ತಮ್ಮ ಸಾವಿನ ಸುದ್ದಿಯ ವಿಚಾರ ನಮ್ಮ ಕುಟುಂಬದವರಿಗೆ ಹೊರತು ಬೇರೆ ಯಾರಿಗೂ ಗೊತ್ತಾಗಬಾರದು ಎಂದು ಹೇಳಿದ್ದರಂತೆ. ಈ ಹಿನ್ನೆಲೆಯಲ್ಲಿ ಅವರ ಮಾತಿನಂತೆ ಕುಟುಂಬದವರು ಯಾರಿಗೂ ತಿಳಿಸದೇ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆಯನ್ನು ಮುಗಿಸಿದ್ದಾರೆ.ಸದಾಶಿವ ಬ್ರಹ್ಮಾವರ್ ಅವರು ದಿವಂಗತ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಉಪೇಂದ್ರ, ಪುನೀತ್, ದರ್ಶನ್, ಸುದೀಪ್, ರವಿಚಂದ್ರನ್, ಜಗ್ಗೇಶ್ ಸೇರಿದಂತೆ ಅನೇಕ ನಟರ ಜೊತೆ ಅಭಿನಯಿಸಿದ್ದರು. ಇವರು ಸುಮಾರು 150 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು.ಕಳೆದ ವರ್ಷ ಬ್ರಹ್ಮಾವರ್ ಅವರು ಮನೆ, ಮಕ್ಕಳನ್ನ ಬಿಟ್ಟು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬೀದಿ ಬೀದಿ ಅಲೆದಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಬಳಿಕ ನನ್ನ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾದವು. ನನ್ನನ್ನು ಮಗ ಮತ್ತು ಸೊಸೆ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಬೈಲಹೊಂಗಲದಲ್ಲಿ ಹಿರಿಯ ನಟ ಸದಾಶಿವ ಬ್ರಹ್ಮಾವರ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


