ಮೈಸೂರು: ನಕ್ಷತ್ರ ಆಮೆಗಳನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಆಧರಿಸಿ ಹುಣಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಾಸೀರ್ (40) ಹಾಗೂ ರಿಯಾಜ್ (42) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಮೂಲತಃ ಕೇರಳ ರಾಜ್ಯದವರಾಗಿದ್ದಾರೆ. ಅಕ್ರಮವಾಗಿ ನಕ್ಷತ್ರ ಆಮೆಗಳನ್ನು ಕಾರಿನಲ್ಲಿ ತಂದು ಹುಣಸೂರು ವ್ಯಾಪ್ತಿಯಲ್ಲಿ ಮಾರಾಟಕ್ಕೆ ಮುಂದಾಗಿದ್ದರು. ಇದರ ಖಚಿತ ಮಾಹಿತಿ ಪಡೆದ ಹುಣಸೂರು ಇನ್ಸ್ ಪೆಕ್ಟರ್ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಮೂರು ನಕ್ಷತ್ರ ಆಮೆಗಳು ಹಾಗೂ ಒಂದು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಇವರು ಇಂತಹ ಅನೇಕ ಕೃತ್ಯಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.ಘಟನೆ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


