ಬೆಳಗಾವಿ: 9 ವರ್ಷದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ನಡೆದು ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.3 ದಿನಗಳ ಹಿಂದೆ ಬಾಲಕ ಶಾಲೆಯಿಂದ ಮನೆಗೆ ಹೋಗುವಾಗ ಅಪ್ರಾಪ್ತ ಬಾಲಕರು ಮೀನು ಹಿಡಿಯಲು ಕರೆದುಕೊಂಡು ಹೋಗಿದ್ದಾರೆ. ಹೀಗೆ ಪುಸಲಾಯಿಸಿ ಕರೆದುಕೊಂಡು ಹೋಗಿ ಅಪ್ರಾಪ್ತರಿಬ್ಬರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದಾಗಿ ಬಾಲಕನಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ನೋವು ಸಹಿಸಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಅಪ್ರಾಪ್ತ ಬಾಲಕರು ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮನೆಯವರಿಗೆ ತಿಳಿಸಿದ್ದಾನೆ.ಕೂಡಲೇ ಪೋಷಕರು ಅಸ್ವಸ್ಥ ಬಾಲಕನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆ ದಾಖಲಿಸಿದ್ದು, ಸದ್ಯ ಬಾಲಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೀಗ ಅಪ್ರಾಪ್ತ ಬಾಲಕರ ವಿರುದ್ಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


