ಕೊಪ್ಪಳ: ತಾಯಿ ಹಾಗೂ ಆಸ್ಪತ್ರೆ ಸಿಬ್ಬಂದಿ ಸೇರಿಕೊಂಡು ನವಜಾತ ಹೆಣ್ಣು ಶಿಶುವನ್ನು ಮಾರಾಟ ಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ಗಂಗಾವತಿ ಪಟ್ಟಣದ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.ಕಳೆದ ಸೋಮವಾರ ಗಂಗಾವತಿ ನಿವಾಸಿ ಬಾನು ಬೇಗಂ ಎಂಬವರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಇದಾದ ನಂತರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಸೇರಿ ಬಾನು ಬೇಗಂ ತನ್ನ ಒಂದು ಹೆಣ್ಣು ಮಗುವನ್ನು ಮಾರಾಟ ಮಾಡಿದ್ದರು. ಆಸ್ಪತ್ರೆಯಲ್ಲಿನ ಮಗು ಮಾರಾಟದ ವಿಚಾರವನ್ನು ಅನಾಮಧೇಯ ವ್ಯಕ್ತಿಯೊಬ್ಬ ಶಿಶು ಅಭಿವೃದ್ಧಿ ಅಧಿಕಾರಿಗೆ ಮಾಹಿತಿ ನೀಡಿದ್ದರು.ವಿಷಯ ತಿಳಿಯುತ್ತಿದ್ದ ಕೂಡಲೇ ಆಸ್ಪತ್ರೆಗೆ ಸಿಡಿಪಿಓ ಜಯಶ್ರೀ ಹಾಗೂ ಪೊಲೀಸರು ಭೇಟಿ ನೀಡಿ, ವಿಚಾರಣೆ ನಡೆಸಿದ್ದರು. ಈ ವೇಳೆ ತಾಯಿಯ ಬಳಿ ಒಂದೇ ಮಗು ಇರುವ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೇ ಆಸ್ಪತ್ರೆ ಸಿಬ್ಬಂದಿ ಬಾನು ಬೇಗಂಗೆ ಒಂದೇ ಮಗು ಜನಿಸಿದೆ ಎಂದು ಹೇಳಿ, ಜರೀನಾ ಎಂಬ ಮಹಿಳೆಗೆ ಮತ್ತೊಂದು ಮಗು ಜನಿಸಿದೆ ಎನ್ನುವ ಸುಳ್ಳು ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿತ್ತು.ಪೊಲೀಸರು ಹಾಗೂ ಅಧಿಕಾರಿಗಳು ಭೇಟಿಯ ಬಳಿಕ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪುನಃ ಬಾನು ಬೇಗಂ ಬಳಿ ತಂದು ಕೊಟಿದ್ದಾರೆ. ಇದರಿಂದ ಅನುಮಾನಗೊಂಡ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ನಗರ ಠಾಣಾ ಪಿಎಸ್‍ಐ ಹೆಬ್ಬಾಳ್ಕರ್ ತೀವ್ರ ತನಿಖೆ ನಡೆಸುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


