ಬೆಂಗಳೂರು: ನಮಗೆ ಹೈಕಮಾಂಡ್ ಮಟ್ಟದಲ್ಲಿ ನ್ಯಾಯ ಸಿಗಬೇಕು. ಇಲ್ಲದಿದ್ರೆ ಬೇರೆ ಯೋಚನೆ ಮಾಡ್ತೀವಿ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಜಾರಕಿ ಹೊಳಿ ಬ್ರದರ್ಸ್ ದಾಳ ಉರುಳಿಸಿದ್ದಾರೆ.ಈ ವೇಳೆ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ದುಡುಕದಂತೆ ಎಚ್ಚರಿಕೆ ನೀಡಿದ್ದಾರೆ. ರಾಜಕಾರಣ ಮೊದಲಿನಂತಿಲ್ಲ. ದುಡುಕಿ ತೀರ್ಮಾನ ಮಾಡಿದರೆ ಸರ್ವೈವಲ್ ಆಗೋದು ಕಷ್ಟ. ಹೆಚ್ಚು ಕಡಿಮೆ ಆದರೆ ರಾಜಕೀಯ ಭವಿಷ್ಯವೇ ಅಂತ್ಯವಾಗುತ್ತೆ ಅಂತ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಎಚ್ಚರಿಕೆಗೆ ರಮೇಶ್ ಜಾರಕಿಹೊಳಿ ಮೌನವಾಗಿದ್ದಾರೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನೂ ಓದಿ: ನಿಮ್ಮಿಂದ ಸಾಧ್ಯವಾಗದೇ ಇದ್ರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ- ಸಿದ್ದು, ಜಾರಕಿಹೊಳಿ ಸಭೆಯ ಇನ್‍ಸೈಡ್ ಸ್ಟೋರಿಡಿಕೆಶಿ ಮೇಲಿನ ದೂರಿನ ಜೊತೆಗೆ ತಮ್ಮ ಬೇಡಿಕೆ ಈಡೇರಿಕೆಗೂ ನಿಮ್ಮ ಬೆಂಬಲ ಬೇಕು. ಹೈಕಮಾಂಡ್ ಬಳಿ ಮಾತನಾಡುವಾಗ ನೀವು ಜೊತೆಗಿರಿ ಅಂತ ಸಿದ್ದರಾಮಯ್ಯ ಅವರನ್ನು ಜಾರಕಿಹೊಳಿ ಬ್ರದರ್ಸ್ ಬೆಂಬಲಕ್ಕೆ ಆಹ್ವಾನಿಸಿದ್ದಾರೆ. ಈ ವೇಳೆ ಮಾಜಿ ಸಿಎಂ ಅವರು ಗೊಂದಲದಲ್ಲೇ ಓಕೆ ಅಂದಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಜಾರಕಿಹೊಳಿ ಬ್ರದರ್ಸ್ ಗೆ ಹೈಕಮಾಂಡ್ ಮಟ್ಟದಲ್ಲಾದ್ರೂ ಪರಿಹಾರ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


