ಚಿಕ್ಕೋಡಿ:  ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕೆಎಲ್‍ಇ ಎಂಜಿನಿಯರಿಂಗ್ ಕಾಲೇಜ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ವಿವೇಕ್ ಯಮಕನ ಮರಡಿ(19) ಆತ್ಮಹತ್ಯೆಗೆ ಶರಣಾದ ಯುವಕ. ವಿವೇಕ್ ಕೆಎಲ್‍ಇ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.ವಿವೇಕ್ ಮೆಕ್ಯಾನಿಕಲ್ ವಿಭಾಗದಲ್ಲಿ ಫಸ್ಟ್ ಸೆಮ್ ನಲ್ಲಿ ಓದುತ್ತಿದ್ದನು. ಕಾಲೇಜಿನ ಬಾಯ್ಸ್ ಹಾಸ್ಟೆಲ್‍ನ ರೂಮ್ ನಂ 312 ರಲ್ಲಿ ಹಗ್ಗವೊಂದರಿಂದ ವಿವೇಕ್ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವೇಕ್ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.ಸದ್ಯ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


