ಬೀದರ್: ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಸೀಮೆ ಎಣ್ಣೆ ಸುರಿದು ಕೊಂಡು ಆತ್ಮಹತ್ಯೆ ಶರಣಾದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ನಡೆದಿದೆ.ಉಮೇಶ್(35)ಆತ್ಮಹತ್ಯೆ ಮಾಡಿಕೊಂಡ ಮಗ. ಈತನ ತಂದೆ ಗುಂಡಪ್ಪ 5.50 ಲಕ್ಷ ಸಾಲ ಮಾಡಿದ್ದರು. ತಂದೆ ಸಾಲ ಮಾಡಿಕೊಂಡಿದ್ದರಿಂದ ಉಮೇಶ್ ಸಾಲ ತೀರಿಸುವ ಬಗ್ಗೆ ನೊಂದಿದ್ದರು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಅಂತ ಸೀಮೆ ಎಣ್ಣೆ ಸುರಿದು ಬಳಿಕ ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಉಮೇಶ್ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಉಮೇಶ್ ಈ ಕೃತ್ಯ ಎಸಗಿದ್ದಾನೆ ಅಂತ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.ಜನವಾಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


