ಕೋಲಾರ: ಕುಡಿದು ಬಂದು ನಿತ್ಯ ಕಿರುಕುಳ ನೀಡುತ್ತಿದ್ದ ಪತಿಯನ್ನು ತಾಯಿ ಹಾಗೂ ಮಗನೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಆಲಂಬಾಡಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಗ್ರಾಮದ ಮುನಿಕೃಷ್ಣ(45) ಕೊಲೆಯಾದ ವ್ಯಕ್ತಿ. ಶುಕ್ರವಾರ ಮುನಿಕೃಷ್ಣ ಪತ್ನಿ ಸುಕನ್ಯ ಹಾಗೂ ಮಗ ಕತ್ತು ಹಿಸುಕಿ ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ.ಮೃತ ಮುನಿಕೃಷ್ಣನ ತಾಯಿ ರಾಮಕ್ಕನಿಗೆ ಅನುಮಾನ ಬಂದ ಹಿನ್ನೆಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸೊಸೆ ಹಾಗೂ ಮೊಮ್ಮಗನ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಬಂಗಾರಪೇಟೆ ಪೊಲೀಸರು ತಾಯಿ ಮತ್ತು ಮಗನನ್ನು ವಿಚಾರಣೆಗೆ ಒಳಪಡಿಸಿದಾಗ, ನಿತ್ಯ ಕುಡಿದು ಕಿರುಕುಳ ನೀಡುತ್ತಿದ್ದ ಹಿನ್ನೆಲೆ ತಾವೇ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.ಸದ್ಯ ಪತ್ನಿ ಹಾಗೂ ಮಗನನ್ನು ಬಂಗಾರಪೇಟೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


