ಬೆಂಗಳೂರು: ಬೆಳ್ಳಂ ಬೆಳ್ಳಗೆ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವಿಗಿಡಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಗ್ರಾಮದ ಬಳಿ ನಡೆದಿದೆ.ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸ್ವಲ್ಪ ದೂರಕ್ಕೆ ಬಿದ್ದು ಬೆಂಕಿ ಹೊತ್ತಿ ಉರಿದಿದ್ದು ಬಾರಿ ಅನಾಹುತ ತಪ್ಪಿದಂತಾಗಿದೆ.ಶಾಲಾ ಬಸ್ ನಲ್ಲಿ 10ಕ್ಕೂ ಹೆಚ್ಚು ಮಕ್ಕಳಿದ್ದು ಬಾರಿ ಅನಾಹುತದಿಂದ ಪಾರಾಗಿದ್ದಾರೆ. ನಂತರ ಬೇರೊಂದು ಬಸ್ ವ್ಯವಸ್ಥೆ ಮಾಡಿ ಮಕ್ಕಳನ್ನು ಶಾಲೆಗೆ ಕಳುಹಿಸಲಾಗಿದೆ. ಈ ಘಟನೆ ನಡೆದ ಬಳಿಕ ಶಾಲಾ ಬಸ್ ಚಾಲಕ ಪರಾರಿಯಾಗಿದ್ದು, ಮೃತರ ವಿವರ ಇನ್ನು ತಿಳಿದು ಬಂದಿಲ್ಲ.ಸದ್ಯ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


