ಮೈಸೂರು: ಬೈಕ್‍ನಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಗ್ರಾಮದ ಬಳಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರವೀಣ್ (24) ಮತ್ತು ರವಿ (26) ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ 2 ಕೆಜಿ ಗಾಂಜಾ ವಶ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ನಂಜನನಾಯಕನಹಳ್ಳಿ ಗ್ರಾಮದ ರಾಜು ರೆಡ್ಡಿ ಎಂಬವರ ಜಮೀನಿನಲ್ಲಿ ಬೆಳೆಯಲಾಗಿದೆ. ಇವರಿಬ್ಬರಿಗೂ ಗಾಂಜಾ ಸರಬರಾಜು ಮಾಡಿದ್ದ ರಾಜು ರೆಡ್ಡಿಯನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಘಟನೆ ಸಂಬಂಧಪಟ್ಟಂತೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


