ಬೆಳಗಾವಿ: ನಗರದ ಸುವರ್ಣ ಸೌಧದಲ್ಲಿ ಇಂದು ಸಿಎಂ ಪ್ರಥಮ ಜನತಾ ದರ್ಶನ ನಡೆಸಲಾಗುತ್ತಿದ್ದು, ಜಿಲ್ಲಾಡಳಿತ ಸಿಬ್ಬಂದಿ ಭಾಗವಹಿಸುತ್ತಿದ್ದಾರೆ.ಮಾನ್ಯ ಮುಖ್ಯಮಂತ್ರಿಗಳು ಪ್ರಥಮ ಬಾರಿ ಜನತಾ ದರ್ಶನ ಮಾಡಲಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ವಾಹನ ತಯಾರಾಗಿದ್ದು, ಜಿಲ್ಲೆಯ ಜಿಲ್ಲಾಡಳಿತ ಸಿಬ್ಬಂದಿಗಳೆಲ್ಲಾ ಜನತಾ ದರ್ಶನಕ್ಕೆ ತೆರಳಲು ಸಿದ್ದರಾಗಿದ್ದಾರೆ. ಅಷ್ಟೇ ಅಲ್ಲದೇ ಜನತಾ ದರ್ಶನವನ್ನು ಯಾವ ರೀತಿ ಮಾಡಬೇಕು ಎಂದು ಈಗಾಗಲೇ ತರಬೇತಿಯನ್ನು ನೀಡಿದ್ದಾರೆ.ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. 50ಕ್ಕೂ ಹೆಚ್ಚು ಸಿಬ್ಬಂದಿ, ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಶುಕ್ರವಾರ ಜಿಲ್ಲೆಯ ಪುರಸಭೆಯಲ್ಲಿ ಯಾವ ರೀತಿಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾಡಲಿದ್ದಾರೆ ಹಾಗೂ ಸಮಸ್ಯೆಗಳನ್ನು ಯಾವ ರೀತಿ ಕೇಳಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


