ಹಾಸನ: ರಾಜ್ಯ ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ಯಾರೂ ಗಾಬರಿಯಾಗಬೇಕಿಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಏನೇ ಏರುಪೇರು ಮತ್ತು ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಮುಖ್ಯುಮಂತ್ರಿ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹಾಗೂ ಉಭಯ ಪಕ್ಷಗಳ ರಾಜ್ಯಾಧ್ಯಕ್ಷ ಸರಿಪಡಿಸಲಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.ಮಾಜಿ ಸಿಎಂ ಸಿದ್ದರಾಮಯ್ಯ ಬೇರೆ ಅಲ್ಲ, ಸರ್ಕಾರ ಬೇರೆ ಅಲ್ಲ, ನಾವೆಲ್ಲರೂ ಒಂದೇ. ಬಿಜೆಪಿಯವರು ಸರ್ಕಾರ ಅಸ್ಥಿರ ಗೊಳಿಸಲು ಯತ್ನಿಸಿದರೆ ಅವರಿಗೆ ಸಿಎಂ ಕುಮಾರಸ್ವಾಮಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಟಾಂಗ್ ನೀಡಿದರು. ಇದೇ ವೇಳೆ ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.ಮುಂದಿನ ವಾರ ಸಿಎಂ ಕುಮಾರಸ್ವಾಮಿ ಹಾಸನ ಜಿಲ್ಲೆಗೆ ಸಿಎಂ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಇಂದು ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ರೇವಣ್ಣ ತಿಳಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


