ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಆಕ್ಟಿವಾ ಹೊಂಡಾದಲ್ಲಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೆಬ್ಬಾಳದ ಬಳಿಯಿರುವ ಲುಂಬಿನಿ ಗಾರ್ಡನ್ ಬಳಿ ನಡೆದಿದೆ.ಸುರೇಖಾ ಹಾಗೂ ಆರಾಧ್ಯ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸಂಬಂಧಿಕರ ಮನೆಯಲ್ಲಿ ಗಣೇಶನ ಹಬ್ಬ ಮುಗಿಸಿ ದಂಪತಿ ಹಾಗೂ ಅವರ ಮಗಳು ತಮ್ಮ ಆಕ್ಟಿವಾ ಹೊಂಡಾದಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ಲುಂಬಿನಿ ಗಾರ್ಡನ್ ಬಳಿ ಅಪರಿಚಿತ ವಾಹನವೊಂದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಸುರೇಖಾ ಹಾಗೂ ಮಗಳು ಆರಾಧ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ರಘು ಗಂಭೀರವಾಗಿ ಗಾಯಗೊಂಡಿದ್ದಾರೆ.ದಾರಿಹೋಕರು ಅಪಘಾತವಾಗಿರುವುದನ್ನು ಗಮನಿಸಿ, ಕೂಡಲೇ ಆಂಬುಲೆನ್ಸ್ ಮೂಲಕ ಗಂಭೀರವಾಗಿ ಗಾಯಗೊಂಡಿದ್ದ ರಘು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


