ಮಂಡ್ಯ: ನಾಡಿನಾದ್ಯಂತ ಗುರುವಾರ ಗಣೇಶ ಹಬ್ಬ ಆಚರಿಸುತ್ತಿದ್ದು, ಮಂಡ್ಯದಲ್ಲಿ ಮಹಿಳೆಯೊಬ್ಬರು ಗಣಪತಿಗೆ ಪೂಜೆ ಸಲ್ಲಿಸಿ ಬಳಿಕ ನೇಣಿಗೆ ಶರಣಾದ ಘಟನೆ ನಡೆದಿದೆ.ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ದೇವಿರಹಳ್ಳಿ ಗ್ರಾಮದ ಗೌರಮ್ಮ (55) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಇವರು ಗುರುವಾರ ಹಬ್ಬವಾದ ಕಾರಣ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾಲಬಾಧೆಯಿಂದ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೌರಮ್ಮ ಪತಿ ಈಗಾಗಲೇ ನಿಧನ ಹೊಂದಿದ್ದರು. ಹೀಗಾಗಿ ಕುಟುಂಬದ ಜವಬ್ದಾರಿ ಗೌರಮ್ಮ ಮೇಲಿತ್ತು. ಗೌರಮ್ಮ ಅವರಿಗೆ ಓರ್ವ ಗಂಡು ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೆಣ್ಣು ಮಕ್ಕಳ ಮದುವೆಯಾಗಿತ್ತು. ಆದರೆ ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ಒಂಬತ್ತು ಲಕ್ಷ ಸಾಲವಿತ್ತು. ಹೀಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


