ಮಡಿಕೇರಿ: ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಕೇಂದ್ರದಿಂದ ಬಂದಿದ್ದ ತಂಡಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ಥಳೀಯ ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.ಗುರುವಾರ ಕೇಂದ್ರದ ಪರಿಶೀಲನೆ ತಂಡದೊಂದಿಗೆ ಸಂಸದ ಪ್ರತಾಪ್ ಸಿಂಹರವರು ಮಡಿಕೇರಿ ತಾಲೂಕಿನ ಹೆಬ್ಬೆಟ್ಟಗೇರಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಕೇಂದ್ರ ತಂಡಕ್ಕೆ ಭೂ ಪರಿವರ್ತನೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಸದರ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. `ನೀವು ಕೇಂದ್ರದ ಪರಿಶೀಲನೆ ತಂಡಗಳಿಗೆ ತಪ್ಪು ಮಾಹಿತಿ ನೀಡುತ್ತಿದ್ದೀರಿ, ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದು ನಮ್ಮ ದುರಂತ. ತಪ್ಪು ಮಾಹಿತಿ ನೀಡಿ ಜನರನ್ನು ಒಕ್ಕಲೆಬ್ಬಿಸಲು ಯತ್ನಿಸುತ್ತಿದ್ದೀರಿ. ಬೆಂದ ಗಾಯಕ್ಕೆ ಉಪ್ಪು ನೀರು ಸುರಿಯುತ್ತಿದ್ದೀರಾ ಎಂದು ತೀವ್ರವಾಗಿ ಹರಿಹಾಯ್ದರು.ನಿಮ್ಮಂಥವರಿಂದ ಪಕ್ಷ ಉದ್ಧಾರ ಆಗಲ್ಲ. ನೀವು ಮೊದಲು ನಮ್ಮ ಪಕ್ಷದ ಸಂಸದ ಎಂಬುದನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪಕ್ಷದಲ್ಲಿ ನನ್ನ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತೀರೋ ತೆಗೆದುಕೊಳ್ಳಿ ಎಂದು ಖಾರವಾಗಿ ನುಡಿದ್ರು. ಈ ವೇಳೆ ಸ್ಥಳೀಯ ಬಿಜೆಪಿ ಶಾಸಕ ಸಹ ಉಪಸ್ಥಿತರಿದ್ದರು. ಬಿಜೆಪಿಯ ಹಿರಿಯ ಮುಖಂಡರ ಹೇಳಿಕೆಯಿಂದ ಸಂಸದ ಪ್ರತಾಪ್ ಸಿಂಹ ತೀವ್ರ ಮುಜುಗರಕ್ಕೊಳಗಾಗಿ ಸ್ಥಳದಿಂದ ತೆರಳಿದರು ಎನ್ನಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


