ಬೆಂಗಳೂರು: ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದಾಗ ಕಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ದೊಡ್ಡನಕುಂದಿ ರಸ್ತೆ ಬಳಿ ಸಂಭವಿಸಿದೆ.ಶ್ರೀಜ(47), ಲವೀನ್(25), ಇಸ್ಮಾ(54) ಮತ್ತು ಮೀರ್ಸಿ(47) ಮೃತ ದುರ್ದೈವಿಗಳು. ಈ ಅಫಘಾತ ಓಲ್ಡ್ ಏರ್ ಪೋರ್ಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮತ್ತೊಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.ಕಾರಿನಲ್ಲಿ ಒಟ್ಟು ಐದು ಮಂದಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗಿದ್ದರು. ನಂತರ ಅಂತ್ಯಕ್ರಿಯೆ ಮುಗಿಸಿ ಮನೆಗೆ ಹಿಂದಿರುತ್ತಿದ್ದಾಗ ದೊಡ್ಡನಕುಂದಿ ರಸ್ತೆ ಬಳಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ಘಟನೆ ಸ್ಥಳದಲ್ಲೇ ಕಾರ್ ಚಾಲಕ ಸೇರಿದ್ದಂತೆ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದವರನ್ನು ಕೂಡಲೇ ವೈದೇಹಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ನಡೆಯುತ್ತಿದೆ.ಈ ಅಪಘಾತದಿಂದ ಬಿಎಂಟಿಸಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯಕ್ಕೆ ವೈಟ್ ಫೀಲ್ಡ್ ನ ಸಕ್ರ ಆಸ್ಪತ್ರೆಗೆ ನಾಲ್ವರ ಮೃತದೇಹವನ್ನು ರವಾನೆ ಮಾಡಲಾಗಿದೆ.ಈ ಕುರಿತು ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


