ಹುಬ್ಬಳ್ಳಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮಿ ಜಾಲಿಹಾಳ(19) ನೇಣಿಗೆ ಶರಣಾದ ಗೃಹಿಣಿ. ಮೂರು ತಿಂಗಳ ಹಿಂದೆ ಯಲ್ಲಪ್ಪನ ಜೊತೆ ಲಕ್ಷ್ಮಿ ಮದುವೆ ಮಾಡಿಕೊಡಲಾಗಿತ್ತು. ಮನೆಯಲ್ಲಿಯೇ ನೇಣು ಹಾಕಿಕೊಂಡ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಗಂಡನ ಮನೆಯವರು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಯುವತಿಯರ ಪೋಷಕರು ಆರೋಪಿಸಿದ್ದಾರೆ.ತವರು ಮನೆಯಿಂದ ವರದಕ್ಷಿಣೆ ತರಬೇಕು. ಹೊಸ ಬೈಕ್ ಕೊಡೆಸಬೇಕೆಂದು ಪತಿ ಯಲ್ಲಪ್ಪ ಪದೇ ಪದೇ ಪೀಡಿಸುತ್ತಿದ್ದ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದಂತೆ ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸದ್ಯ ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


