ಮಂಡ್ಯ: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ತವರಿಗೆ ಬಾ ತಂಗಿ ಎನ್ನುವ ಮೂಲಕ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಟ್ಟಿದ್ದಾರೆ.ಕಳೆದ ಒಂದು ವರ್ಷದಿಂದ ಜಿಲ್ಲೆಯಿಂದ ನಾಪತ್ತೆಯಾಗಿರುವ ರಮ್ಯಾರವರು ಪುನಃ ಮಂಡ್ಯಕ್ಕೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮನವಿ ಮಾಡಿಕೊಂಡಿದ್ದಾರೆ. ರಮ್ಯಾರವರಿಗೆ ಪೋಸ್ಟ್ ಮೂಲಕ ಬಾಗಿನವನ್ನು ತಲುಪಿಸಿ, ತವರಿಗೆ ಬಾ ತಂಗಿ ಎನ್ನುವ ಮೂಲಕ ಉಡುಗೊರೆಯನ್ನು ಕಳುಹಿಸಿಕೊಟ್ಟಿದ್ದಾರೆ.ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಿಗೂ ಮತಚಲಾಯಿಸಲು ಬಂದಿಲ್ಲ. ಗೌರಿ-ಗಣೇಶ ಹಬ್ಬಕ್ಕಾದರೂ ತವರು ಕ್ಷೇತ್ರ ಮಂಡ್ಯಕ್ಕೆ ಆಗಮಿಸಿ, ಜನರ ಕಷ್ಟಕ್ಕೆ ಸ್ಪಂದಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷದಿಂದ ನಾಪತ್ತೆಯಾಗಿರುವ ನೀವು, ಈಗಲಾದರೂ ಆಗಮಿಸದಿದ್ದರೆ ಮುಂದಿನ ಲೋಕಾ ಚುನಾವಣೆಗೆ ಬಂದಾಗ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ.ಬಾಗಿನದಲ್ಲಿ ಹೂವು, ಬಳೆ ಹಾಗೂ ತೆಂಗಿನಕಾಯಿ ಸೇರಿದಂತೆ ಎಲ್ಲವನ್ನೂ ಅಂಚೆ ಮೂಲಕ ರಮ್ಯಾಗೆ ರವಾನಿಸಿದ್ದಾರೆ. ಗೌರಿ-ಗಣೇಶ ಹಬ್ಬದ ನೆಪಕ್ಕಾದರೂ ರಮ್ಯಾರವರು ತವರು ಜಿಲ್ಲೆಗೆ ಬರುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಲ್ಲಿ ಮತ ಚಲಾಯಿಸಿದ ಬಾರಿ ಟೀಕೆಗೆ ರಮ್ಯಾ ಗುರಿಯಾಗಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


