ಬೆಂಗಳೂರು: ವಿದ್ಯಾರ್ಥಿನಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ಸ್ಕೂಟಿಗೆ ರೋಡ್ ರೋಲರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬೆಂಗಳೂರು- ಹೊಸೂರು ಮುಖ್ಯ ರಸ್ತೆಯ ಬೊಮ್ಮಸಂದ್ರ ಸರ್ವಿಸ್ ರೋಡ್ ಬಳಿ ನಡೆದಿದೆ.ಯುವತಿ ಬೊಮ್ಮಸಂದ್ರ ಮೂಲದ ಲಯ(19) ಎಂದು ತಿಳಿದು ಬಂದಿದೆ. ಲಯ ಎಂದಿನಂತೆ ಮುಂಜಾನೆ ಮನೆಯಿಂದ ಸ್ಕೂಟಿಯಲ್ಲಿ ಬೊಮ್ಮಸಂದ್ರ ಸರ್ವಿಸ್ ರೋಡ್ ಮಾರ್ಗವಾಗಿ ಕಾಲೇಜಿಗೆ ತೆರಳುತ್ತಿದ್ದಾಗ ಎದುರು ಕಡೆಯಿಂದ ಬರುತ್ತಿದ್ದ ರೋಡ್ ರೋಲರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಲಯ ಹುಸ್ಕೂರು ಬಳಿಯ ಎಸ್‍ಎಫ್‍ಎಸ್ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಸದ್ಯ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


