ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಳನ್ನು ಬಳಸಲಾಗುತ್ತಿದೆ. ಇದರ ಬಗ್ಗೆ ಪೊಲೀಸರಿಗೆ, ಕಂದಾಯ ಅಧಿಕಾರಿಗಳಿಗೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲವೇ? ಇದೇನು ಟೆರರಿಸಂ ರಾಷ್ಟ್ರವೇ ಎಂದು ಅಧಿಕಾರಿಗಳನ್ನು ನಾಗಮಂಗಲದ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ.ಜಿಲ್ಲಾ ಪಂಚಾಯತ್‍ನ ಕಾವೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಅಕ್ರಮ ಕಲ್ಲುಗಣಿಗಾರಿಕೆ ಸಂಬಂಧ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ಮೇಲೆ ಕಿಡಿಕಾರಿದರು.ಜಿಲ್ಲೆಯಲ್ಲಿ ಜಿಲೆಟಿನ್ ಸಾಗಾಣಿಕೆ ಆಗುತ್ತಿದ್ದರೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳೂ ಕ್ರಮ ಕೈಗೊಂಡಿಲ್ಲ. ಗಣಿಗಾರಿಕೆ ಪ್ರದೇಶದಲ್ಲಿ ಸ್ಫೋಟ ನಡೆಯುತ್ತಿದ್ದರೂ ಕ್ರಮವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


