ವಿಜಯಪುರ: ಸುಣ್ಣದ ಡಬ್ಬಿಯನ್ನು ನುಂಗಿ ಒಂಭತ್ತು ತಿಂಗಳ ಮಗು ಮೃತಪಟ್ಟಿರುವ ಕರುಣಾಜನಕ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದಿದೆ.ತಿಕೋಟ ಪಟ್ಟಣದ ನಿವಾಸಿ ವಿಶ್ವನಾಥ ತಾಳಿಕೋಟಿ ಎಂಬವರ ಒಂಭತ್ತು ತಿಂಗಳ ಮಗು ಮೃತಪಟ್ಟಿದೆ. ಮಗು ಮನೆಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಸುಣ್ಣದ ಡಬ್ಬಿಯನ್ನು ನುಂಗಿದೆ. ಇದನ್ನು ಗಮನಿಸಿದ ಪೋಷಕರು ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು.ಕೂಡಲೇ ಚಿಕಿತ್ಸೆ ನೀಡಿದ ವೈದ್ಯರು ಸುಣ್ಣದ ಡಬ್ಬಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು, ಆದರೆ ಸುಣ್ಣದ ಡಬ್ಬಿಯಲ್ಲಿದ್ದ ಸುಣ್ಣವು ಮಗುವಿನ ದೇಹವನ್ನು ಸೇರಿದ್ದರಿಂದ ಮಗು ಮೃತಪಟ್ಟಿತ್ತು. ಘಟನೆ ಸಂಬಂಧ ತಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


