ಬೀದರ್: ಯುವತಿಯನ್ನು ಚುಡಾಯಿಸಿದ ರೋಡ್ ರೋಮಿಯೋಗೆ ಸಾರ್ವಜನಿಕರು ಸಖತ್ ಗೂಸಾ ನೀಡಿರುವ ಘಟನೆ ಬೀದರ್ ನಗರದ ರೈಲ್ವೆ ನಿಲ್ದಾಣ ಬಳಿ ನಡೆದಿದೆ.ಬೀದರ್ ರೈಲು ನಿಲ್ದಾಣದಲ್ಲಿ ಯುವತಿ ತಮ್ಮ ಗ್ರಾಮಕ್ಕೆ ಹೋಗಲು ನಿಂತಿದ್ದಳು. ಈ ವೇಳೆ ರೋಡ್ ರೋಮಿಯೋ ಬಂದು ಯುವತಿಯನ್ನು ಚುಡಾಯಿಸಿದ್ದಾನೆ. ಅಷ್ಟೇ ಅಲ್ಲದೇ ಒತ್ತಾಯ ಪೂರ್ವಕವಾಗಿ ಯುವತಿ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾನೆ. ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಆಟೋದಲ್ಲಿ ಸಾಗಿಸಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಈ ವೇಳೆ ಯುವತಿಗೆ ರಕ್ಷಣೆಗಾಗಿ ಕೂಗಿಗೊಂಡಿದ್ದಾಳೆ. ಇದನ್ನು ಕಂಡ ಸ್ಥಳೀಯರು ಕಾಮುಕನಿಂದ ಯುವತಿಯ ರಕ್ಷಣೆ ಮಾಡಿ ಆತನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ರಸ್ತೆಯಲ್ಲಿಯೇ ಆರೋಪಿಗೆ ಗೂಸಾ ನೀಡುತ್ತಾ ಸಾರ್ವಜನಿಕರೇ ಪೊಲೀಸ್ ಠಾಣೆಗೆ ಎಳೆದುಕೊಂಡು ಹೋಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.ನ್ಯೂಟೌ ನ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


