ಬಾಗಲಕೋಟೆ: ಲಾರಿ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ.ಕಾಶಿಂಸಾಬ ಮುಜಾವರ(42) ಅಪ್ರಿನಾ ಕಾಶಿಂಸಾಬ ಮುಜಾವರ(25) ಮತ್ತು ಶಭಾನಾ ನೂರ ಅಹಮದ್(38) ಮೃತ ದುರ್ದೈವಿಗಳು. ಮುಧೋಳ ವಿಜಯಪುರ-ಬೆಳಗಾವಿ ರಾಜ್ಯ ಹೆದ್ದಾರಿ ಮುಧೋಳ ನಗರದ ಕೆ.ಆರ್.ಲಕ್ಕಂ ಶಾಲೆಯ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದವರು ಎಂದು ತಿಳಿದು ಬಂದಿದೆ.ಮೂವರು ಕಾರಿನಲ್ಲಿ ದುಡಿಯಲು ಗೋವಾಕ್ಕೆ ಹೋಗಿದ್ದು, ಕೆಲಸ ಮುಗಿಸಿ ಗೋವಾದಿಂದ ತಮ್ಮ ಊರು ವಿಜಯಪುರಕ್ಕೆ ಓಮ್ನಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ರಾಜ್ಯ ಹೆದ್ದಾರಿ ಮುಧೋಳ ನಗರದ ಕೆ.ಆರ್.ಲಕ್ಕಂ ಶಾಲೆಯ ಬಳಿ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಧೋಳ ಪೊಲೀಸರು ಮತ್ತು ಬಾಗಲಕೋಟೆ ಎಸ್‍ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


