ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು 6 ಕೋಟಿ ಜನ ನೋಡುವಂತಾಯಿತು. ಇದೊಂದು ಮುಗಿದ ಅಧ್ಯಾಯವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ, ಹೈಕಮಾಂಡ್‍ಗೆ ಎಚ್ಚರಿಕೆ ನೀಡಿದ್ದಾರೆ.ಪಕ್ಷದ ಹಿತದೃಷ್ಟಿಯಿಂದ ಹಾಗೂ ಎಲ್ಲರ ಸಹಮತದಿಂದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಯಾಗಿದೆ. ಇದು ಯಾರ ಗೆಲುವು ಅಲ್ಲ, ಯಾರ ಸೋಲು ಅಲ್ಲ. ಜಿಲ್ಲೆಯ ನಾಯಕರಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಆರಿಸಬೇಕಿತ್ತು, ಹೀಗಾಗಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಲಹೆ ಮೇರೆಗೆ ಸಮಸ್ಯೆ ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಲೋಕಸಭಾ ಚುನಾವಣೆ ವೇಳೆ ಮತ್ತೇ ಸಮಸ್ಯೆ ಬರಲಿದ್ದು, ಅದನ್ನು ಪಕ್ಷದ ವರಿಷ್ಠರೇ ಬಗೆಹರಿಸುವರು. ಆದರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸ್ವತಂತ್ರ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೈಕಮಾಂಡ್‍ಗೆ ಖಡಕ್ ಎಚ್ಚರಿಕೆ ನೀಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


