ಚಾಮರಾಜನಗರ: ಬೈಕ್ ಹಾಗೂ ಟೆಂಪೋ ಡಿಕ್ಕಿ ಹೊಡೆದು ಪ್ರೌಢಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸೋಮವಾರಪೇಟೆ ಬಳಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.ಬಿಸಿಲವಾಡಿ ಸರ್ಕಾರಿ ಪ್ರೌಢಶಾಲೆಯ ಭೀಮೇಶ್ ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ ಬೈಕ್‍ನಲ್ಲಿ ಶಾಲೆಗೆ ತೆರಳುತ್ತಿದ್ದರು. ಆಗ ಬೈಕಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಭೀಮೇಶ್ ಮೃತಪಟ್ಟಿದ್ದರು. ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯ ಆವರಣದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿದ್ದರು.ಅಪಘಾತಕ್ಕೆ ಕಾರಣವಾದ ಟೆಂಪೋ ಮಾಲೀಕನಿಂದ ಮೃತ ಶಿಕ್ಷಕರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಸಲು ಕ್ರಮ ಕೈಗೊಳ್ಳಲಾಗುತ್ತದೆ. ಅನುಕಂಪ ಆಧಾರದ ಮೇಲೆ ಮೃತ ಶಿಕ್ಷಕರ ಪತ್ನಿಗೆ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ ಹಾಗೂ ಸೂಕ್ತ ಪರಿಹಾರ ನೀಡುವುದಾಗಿ ಸಚಿವ ಎನ್.ಮಹೇಶ್ ಭರವಸೆ ನೀಡಿದ್ದಾರೆ.ಚಾಮರಾಜನಗರದ ವಿವಿಧೆಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ಇದರಿಂದಾಗಿ ಸಂಚಾರ ಪೊಲೀಸರು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಬೆಕು ಎಂದು ಸೂಚನೆ ನೀಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


