ಕೋಲಾರ: ಜಿಲ್ಲಾಸ್ಪತ್ರೆಗೆ ಕಳಂಕ ತರುವ ನಿಟ್ಟಿನಲ್ಲಿ ಕಿಡಿಗೇಡಿಗಳು ಖಾಸಗಿ ಆಸ್ಪತ್ರೆಯಲ್ಲಿ ಅಬಾರ್ಷನ್ ಮಾಡಿದ ನವಜಾತ ಶಿಶುವಿನ ಶವವನ್ನು ತಂದು ಹಾಕಿರುವ ಘಟನೆ ಇಂದು ನಡೆದಿದೆ.ಕೋಲಾರದ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣದ ಮುಂಭಾಗ ಬ್ಯಾಗ್‍ನಲ್ಲಿ ಅಬಾರ್ಷನ್ ಮಾಡಿರುವ ನವಜಾತ ಶಿಸುವಿನ ಶವವನ್ನು ತಂದು ಬಿಸಾಡಿದ್ದಾರೆ. ಆಸ್ಪತ್ರೆ ಮುಂಭಾಗ ಸ್ವಚ್ಚತೆ ಮಾಡುತ್ತಿದ್ದ ವೇಳೆ ನವಜಾತ ಶಿಶುವಿನ ಶವ ಪತ್ತೆಯಾಗಿದೆ.ಸ್ಥಳಕ್ಕೆ ಜಿಲ್ಲಾಸ್ಪತ್ರೆ ಸರ್ಜನ್ ನಾರಾಯಸ್ವಾಮಿ ಹಾಗೂ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಇಂತಹ ಕರಾಳ ಮುಖ ಬಯಲಾಗಿದೆ. ಇತ್ತೀಚೆಗೆ ಕೋಲಾರ ಜಿಲ್ಲಾಸ್ಪತ್ರೆ ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆ ಸೌಲಭ್ಯಗಳನ್ನು ಉಚಿತವಾಗಿ ನೀಡುವ ಮೂಲಕ ಹೆಸರು ಪಡೆದಿದೆ.ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಕಳಂಕ ತರುವ ನಿಟ್ಟಿನಲ್ಲಿ ಹೀಗೆ ಖಾಸಗಿ ಆಸ್ಪತ್ರೆಯಲ್ಲಿ ಅಬಾರ್ಷನ್ ಮಾಡಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನವಜಾತ ಶಿಶುವಿನ ಶವವನ್ನು ತಂದು ಬಿಸಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


