ಕೋಲಾರ: ದುರ್ಬಳಕೆಯಾಗಿರುವ ಹಣದ ಲೆಕ್ಕ ಕೇಳಿದ್ದಕ್ಕೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ಗಳಗಳನೆ ಕಣ್ಣೀರು ಹಾಕಿದ ಪ್ರಸಂಗ ಇಂದು ನಡೆದಿದೆ.ಜಿಲ್ಲೆಯ ಬಂಗಾರಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೇ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಕಣ್ಣೀರು ಹಾಕಿದ್ದಾರೆ.ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್ ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷೆ ಕಣ್ಣೀರು ಹಾಕಿ ನಗೆಪಾಟಲಿಗೆ ಗುರಿಯಾಗಿದ್ದಾರೆ. ಪಂಚಾಯತಿಯ ಸ್ಟಾಂಪ್ ಡ್ಯೂಟಿ ಹಣ ಹಾಗೂ ಕಟ್ಟಡದ ನವೀಕರಣದ ಗೋಲ್ ಮಾಲ್ ನಡೆದಿದ್ದು ಸಂಪೂರ್ಣ ಮಾಹಿತಿ ನೀಡುವಂತೆ ಸದಸ್ಯರು ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ.ದುರ್ಬಳಕೆ ಹಣದ ಲೆಕ್ಕ ಕೇಳಿದ ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೇ ಅಸಹಾಯಕಳಾಗಿ ಗಳಗಳನೆ ಅಧ್ಯಕ್ಷೆ ಕಣ್ಣೀರು ಹಾಕಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಅವರನ್ನು ಸಮಾಧಾನ ಪಡಿಸಿದ ಬಳಿಕ ಮತ್ತೆ ಸಭೆ ಆರಂಭವಾಯಿತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


