ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಾಮನಿದ್ದಂತೆ. ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಂಜನೇಯನಿದ್ದಂತೆ. ರಾಮನಗರದ ಜನ ಸೀತಾದೇವಿ(ಅನಿತಾ ಕುಮಾರಸ್ವಾಮಿ) ಅವರನ್ನು ಈಗ ಕರೆತರಬೇಕಾಗಿದೆ. ರಾಮ ಹಾಗೂ ಅಂಜನೇಯನ ಜೊತೆ ಸೀತಾಮಾತೆಯನ್ನ ಕರೆತಂದ್ರೆ ರಾಮನಗರ ಅಲ್ಲದೇ ರಾಜ್ಯವೂ ಕೂಡಾ ರಾಮರಾಜ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ.ನಗರದಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮುನ್ನ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಚಿವರು, ರೇವಣ್ಣ ಅವರು ಹಗಲು ರಾತ್ರಿ ಅಭಿವೃದ್ಧಿ ಕಾರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ಈಗ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬರಲು ಮುಂಬರುವ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.ಜನತಾದರ್ಶನ, ಗ್ರಾಮವಾಸ್ತವ್ಯ ಮೂಲಕ ಎಚ್.ಡಿ.ಕುಮಾರಸ್ವಾಮಿ ಇತರರಿಗೆ ಮಾದರಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾದರೆ ರಾಮನಗರದ ಜೊತೆಗೆ ರಾಜ್ಯವೂ ಸಮೃದ್ಧವಾಗಿ ಪ್ರಗತಿ ಹೊಂದುತ್ತದೆ ಎಂದು ಭರವಸೆ ನೀಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


