ದಾವಣಗೆರೆ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.ಸುನೀಲ್ ನಾಯ್ಕ್ (24) ಮೃತ ಟ್ರ್ಯಾಕ್ಟರ್ ಚಾಲಕನಾಗಿದ್ದು, ಕಳೆದ ಕೆಲ ತಿಂಗಳಿಂದ ಬಿಳಿಚೋಡ ಹಳ್ಳದಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದನು. ಆದರೆ ರಾತ್ರಿ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ನಾಯ್ಕ್ ಮೃತಪಟ್ಟಿದ್ದಾನೆ.ಕೆಲವರು ಉದ್ದೇಶ ಪೂರ್ವಕವಾಗಿ ಟ್ರ್ಯಾಕ್ಟರ್ ಪಲ್ಟಿ ಮಾಡಿ ಸುನೀಲ್ ನಾಯ್ಕ್ ನನ್ನು ಕೊಲೆ ಮಾಡಿದ್ದಾರೆ. ಬಳಿಕ ಈ ಪ್ರಕರಣವನ್ನು ಅಪಘಾತ ಎಂದು ಹೇಳಿ ಕೊಲೆಯನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ.ಮೃತ ಸುನೀಲ್ ಚಿತ್ರದುರ್ಗ ಜಿಲ್ಲೆಯ ಪಂಜನಟ್ಟಿ ಗ್ರಾಮದ ನಿವಾಸಿಯಾಗಿದ್ದು, ಮರಳು ಸಾಗಿಸಲು ಟ್ರ್ಯಾಕ್ಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಈ ಸಂಬಂಧ ಬಿಳಿಚೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


