ತುಮಕೂರು: ಕ್ರೇನ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕರಜೀವನಹಳ್ಳಿ ಬಳಿ ನಡೆದಿದೆ.ಕರಜೀವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 04 ರಲಿ ಈ ಅಪಘಾತ ಸಂಭವಿಸಿದೆ. ವೆಂಕಟೇಶ್, ಶಶಿಕುಮಾರ್ ಮತ್ತು ಹೇಮಂತ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ.ಇವರು ಕಾರಿನಲ್ಲಿ ಬೆಂಗಳೂರಿನಿಂದ ಶಿರಾ ಕಡೆ ತೆರಳುತಿದ್ದರು. ಕರಜೀವನಹಳ್ಳಿ ಬಳಿ ಲಾರಿಯೊಂದು ಕೆಟ್ಟು ನಿಂತಿತ್ತು. ಆ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಆದರೆ ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಕ್ರೇನ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಪ್ರಜ್ವಲ್(22), ಅಶೋಕ(25) ಮತ್ತು ಅನಿಲ್ ಕುಮಾರ್(20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ಕಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


