ಚಿಕ್ಕಬಳ್ಳಾಪುರ: ಕ್ಯಾಂಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಬೆಂಗಳೂರಿನ ಕಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ನಡೆದಿದೆ.ಮುಂಜಾನೆ 3 ಗಂಟೆ ಸಮಯದಲ್ಲಿ ಅಪಘಾತವಾಗಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಜ್ವಲ್, ಭೂಷಣ್, ವಿಶಾಲ್ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮತ್ತೊರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.ವಿದ್ಯಾರ್ಥಿಗಳು ಬೆಂಗಳೂರು ಕಡೆಯಿಂದ ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆಯ ಸ್ನೇಹಿತರ ಮನೆಗೆ ಬರುತ್ತಿದ್ದರು ಅಂತ ಮಾಹಿತಿ ತಿಳಿದು ಬಂದಿದೆ. ಕ್ಯಾಂಟರ್ ನಲ್ಲಿದ್ದ ಕಬ್ಬಿಣದ ಸರಳುಗಳಿಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.ಈ ಸಂಬಂಧ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಕ್ಯಾಂಟರ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ವಿದ್ಯಾರ್ಥಿಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


