ಮಂಡ್ಯ: 18 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ನಗರಸಭೆಯನ್ನು ಗೆದ್ದುಕೊಂಡಿದ್ದು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.ಮಂಡ್ಯ ಹಿಂದುಳಿದ ನಗರವಾಗಿತ್ತು. ಇನ್ನು ಮುಂದೆ ಅಭಿವೃದ್ಧಿ ಪಥದತ್ತ ಸಾಗಲಿದೆ. ಸಿಎಂ ನಮ್ಮವರು, ಮಂಡ್ಯದಲ್ಲಿ ನಾನು ಶಾಸಕನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಆಗಲಿದೆ. ನಗರಸಭೆಯಲ್ಲಿ ಜೆಡಿಎಸ್ ಪಕ್ಷ ಬಹುಮತ ಪಡೆಯಲು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಡಳಿತ ವೈಖರಿ ಮತ್ತು ಮಾಜಿ ಪ್ರದಾನಿ ದೇವೇಗೌಡರ ಆದರ್ಶವೇ ಕಾರಣ ಎಂದು ಮಂಡ್ಯ ಶಾಸಕ ಶ್ರೀನಿವಾಸ್ ಮತ್ತು ಜೆಡಿಎಸ್ ಪಕ್ಷದ ಪ್ರದಾನ ಕಾರ್ಯರ್ಶಿ ಜಫ್ರುಲ್ಲಾ ಖಾನ್ ಹರ್ಷ ವ್ಯಕ್ತಪಡಿಸಿ ಜಿಲ್ಲೆಯ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದ ಜೆಡಿಎಸ್, ಈಗ ಮಂಡ್ಯ ನಗರಸಭೆಯಲ್ಲೂ ಬಹುಮತ ಪಡೆಯುವ ಮೂಲಕ ಜೆಡಿಎಸ್ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತು ಮಾಡಿದೆ. ಮಂಡ್ಯ, ಮದ್ದೂರು, ನಾಗಮಂಗಲ ಮತ್ತು ಪಾಂಡವಪುರ ಪುರಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.ಇದೇ ವೇಳೆ ಕಾರ್ಯಕರ್ತ ನಿಂಗರಾಜು ಶಾಸಕ ಎಂ ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವಿರುದ್ಧ ಕಿಡಿಕಾರಿದ್ದರು. ನನಗೆ ಟಿಕೆಟ್ ನೀಡಿದ್ರೆ ನಾನೇ ಗೆಲುತ್ತಿದ್ದೆ. ನನಗೆ ಅನ್ಯಾಯ ಮಾಡಿದ್ದೀರಿ. ನಾನು 20 ವರ್ಷಗಳಿಂದ ಪಕ್ಷಕ್ಕೆ ದುಡಿದ್ದೀನಿ. ಇಂದು ನನ್ನ ಮನೆ ಹಾಳಾಗಿದೆ ಎಂದು ನೋವುವನ್ನು ಹೇಳಿಕೊಂಡಿದ್ದರು.ಈ ವೇಳೆ ಬೆಂಬಲಿಗರು ನೊಂದ ಕಾರ್ಯಕರ್ತನನ್ನು ಶಾಸಕರ ಕಚೇರಿಯಿಂದ ಹೊರ ಹಾಕಿದ್ದಾರೆ. ನಿಂಗರಾಜು ಅವರ ಮಂಡ್ಯ ನಗರಸಭೆಯ 12ನೇ ವಾರ್ಡ್ ನಿಂದ ಸ್ಪರ್ಧಿಸಿದ್ದು, ನಾಲ್ಕನೇ ಸ್ಥಾನ ಪಡೆದಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


