ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮೂರು ಸ್ಥಳೀಯ ಸಂಸ್ಥೆಗಳ ಪೈಕಿ ಎರಡರಲ್ಲಿ ಬಿಜೆಪಿ ಗೆದ್ದಿದ್ದು, ಒಂದರಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ.ಚಿತ್ರದುರ್ಗ ನಗರಸಭೆ 35 ವಾರ್ಡ್ ಗಳಲ್ಲಿ ಬಿಜೆಪಿ 17, ಜೆಡಿಎಸ್ 6, ಕಾಂಗ್ರೆಸ್ 5 ಮತ್ತು ಪಕ್ಷೇತರರು 7 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ. ಚಳ್ಳಕೆರೆ ನಗರಸಭೆಯ 31 ವಾರ್ಡ್ ಗಳಲ್ಲಿ ಕಾಂಗ್ರೆಸ್ 16, ಜೆಡಿಎಸ್ 10, ಬಿಜೆಪಿ 4 ಮತ್ತು ಪಕ್ಷೆತರರು 1ರಲ್ಲಿ ಜಯಗಳಿಸಿದ್ದಾರೆ.ಹೊಸದುರ್ಗ ಪುರಸಭೆಯ 21 ವಾರ್ಡ್ ಗಳಲ್ಲಿ ಬಿಜೆಪಿ 14, ಕಾಂಗ್ರೆಸ್ 4 ಮತ್ತು ಪಕ್ಷೇತರರು 5 ವಾರ್ಡ್ ಗಳಲ್ಲಿ ಜಯ ಸಾಧಿಸಿದ್ದು, ಚಿತ್ರದುರ್ಗ ನಗರಸಭೆ ಮತ್ತು ಹೊಸದುರ್ಗ ಪುರಸಭೆ ಬಿಜೆಪಿಗೆ ಪಾಲಾಗಿದೆ. ಚಳ್ಳಕೆರೆ ನಗರಸಭೆ ಕಾಂಗ್ರೆಸ್ ಕೈವಶವಾಗಿದೆ. ಈ ಮೂಲಕ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಚಿತ್ರದುರ್ಗ ನಗರಸಭೆಯಲ್ಲಿ ಅಧಿಕಾರದ ಗದ್ದುಗೆ ಏರಿದ ಸಂಭ್ರಮದಲ್ಲಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv






 Advertisement 




Sign in to your account
Username or Email Address


Password

 Remember Me


