– ಮಾಜಿ ಸಚಿವ ಶಿವರಾಜ್ ತಂಗಡಗಿ ಮುಂದಿನ ಕೊಪ್ಪಳದ ಜಿಲ್ಲಾಧ್ಯಕ್ಷ?ಕೊಪ್ಪಳ: ಕಳೆದ 8 ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೆ ಬಸವರಾಜ ಹಿಟ್ನಾಳ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 5 ಕ್ಷೇತ್ರದಲ್ಲಿ, ಕೇವಲ 2 ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಈ ಕಾರಣಕ್ಕಾಗಿ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹಿಟ್ನಾಳ್ ಪತ್ರದಲ್ಲಿ ತಿಳಿಸಿದ್ದಾರೆ. ಜೂನ್ 7 ರಂದು ಹಿಟ್ನಾಳ್ ರಾಜೀನಾಮೆ ಸಲ್ಲಿಸಿದ್ದು, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ ಹೆಸರು ಕೇಳಿ ಬರುತ್ತಿದೆ.ಮಾಜಿ ಸಿಎಂ ಸಿದ್ದರಾಮಯ್ಯ ತಂಗಡಗಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ಕೊಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಮುಂದಿನ ದಿನದಲ್ಲಿ ಶಿವರಾಜ್ ತಂಗಡಗಿ ಕೊಪ್ಪಳ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಏರಲಿದ್ದಾರೆ ಎನ್ನಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


