ಬೆಂಗಳೂರು: ತೆಲುಗಿನ ಸೈರಾ ನರಸಿಂಹರೆಡ್ಡಿ ಚಿತ್ರದ ಸುದೀಪ್ ಲುಕ್ ರಿವೀಲ್ ಆಗಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೈರಾ ಚಿತ್ರತಂಡ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ.ಸದ್ಯ ತೆಲುಗು ಮಾತ್ರವಲ್ಲದೇ ಇಡೀ ದಕ್ಷಿಣ ಭಾರತೀಯ ಚಿತ್ರರಂಗವೇ ಬೆರಗಾಗಿ ನೋಡುವಂತೆ ಮಾಡಿರುವ ಚಿತ್ರ ಸೈರಾ. ಸ್ವಾತಂತ್ರ್ಯ ಹೋರಾಟದ ವೀರೋದ್ಧಾತ ಕಥೆ ಹೊಂದಿರೋ ಈ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ಸ್ಟಾರ್ ನಟರು ಪಾತ್ರ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಕಿಚ್ಚ ಸುದೀಪ್ ಅವುಕು ಎಂಬೊಂದು ಪ್ರಾಂತ್ಯದ ರಾಜನಾಗಿ ನಟಿಸಲಿದ್ದಾರೆ. ಕಪ್ಪು ಬಟ್ಟೆ ಧರಿಸಿ ಖಡಕ್ ಲುಕ್‍ನಲ್ಲಿ ಕಿಚ್ಚ ಮಿಂಚಿದ್ದಾರೆ.ಮೆಗಾ ಸ್ಟಾರ್ ಚಿರಂಜೀವಿ ನಾಯಕನಾಗಿರೋ ಈ ಚಿತ್ರ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿಯ ಕಥೆಯಾಧಾರಿತ ಚಿತ್ರ. ಮೆಗಾ ಸ್ಟಾರ್ ರೆಡ್ಡಿಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಸುದೀಪ್ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೆಣಸಾಡುವ ಅವುಕು ಪ್ರಾಂತ್ಯದ ರಾಜನಾಗಿ ಕಾಣಿಸಿಕೊಳ್ಳಲಿದ್ದಾರೆ.ಇತಿಹಾಸದಲ್ಲಿಯೂ ಕೂಡಾ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಈ ಅವುಕು ರಾಜನ ಕ್ರಾಂತಿಯ ಬಗ್ಗೆ ಉಲ್ಲೇಖಗಳಿವೆ. ಈ ಮೂಲಕ ಸುದೀಪ್ ಐತಿಹಾಸಿಕ ಚಿತ್ರದಲ್ಲಿನ ಖದರು ತುಂಬಿರೋ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಬಹು ಕಾಲದಿಂದಲೂ ಕೂಡಾ ತೆಲುಗಿನ ಕಿಚ್ಚನ ಅಭಿಮಾನಿಗಳು ಅವರ ನಟನೆಗಾಗಿ ಕಾದು ಕೂತಿದ್ದರು. ಅವರೆಲ್ಲ ಸುದೀಪ್ ಸೈರಾ ಚಿತ್ರದಲ್ಲಿ ನಟಿಸುವ ಸುದ್ದಿ ಕೇಳಿ ಸಂತಸಗೊಂಡಿದ್ದಾರೆ.ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ದಿಗ್ಗಜ ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದು ಬಿಗ್ ಬಜೆಟ್ ಚಿತ್ರ ಇದಾಗಿದೆ. ರಾಮ್‍ಚರಣ್ ನಿರ್ಮಾಣ ಸುರೇಂದ್ರ ರೆಡ್ಡಿ ನಿರ್ದೇಶನ ಈ ಚಿತ್ರಕ್ಕಿದ್ದು 2019ರಲ್ಲಿ ಬಿಡುಗಡೆಯಾಗಲಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


