ಮೈಸೂರು: ಪತಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಗೃಹಿಣಿ ತನ್ನ ಪ್ರಿಯಕರನ ಜೊತೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪವಿರುವ ಕಾರ್ಯ ಗ್ರಾಮದ ಬಳಿ ನಡೆದಿದೆ.ಮಣಿಯಮ್ಮ(40) ಹಾಗೂ ಅವಿವಾಹಿತ ಸಿದ್ಧರಾಜು(30) ಕಬಿನಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಜೋಡಿ. ಮಣಿಯಮ್ಮ ಹಾಗೂ ಸಿದ್ಧರಾಜು ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದ ನಿವಾಸಿಗಳಾಗಿದ್ದು, ಕಳೆದ ಮೂರು ವರ್ಷಗಳಿಂದ ಇವರಿಬ್ಬರು ಸಂಬಂಧ ಹೊಂದಿದ್ದರು.ಕುವೆಂಪುನಗರದಲ್ಲಿ ಸಿದ್ಧರಾಜು ಜೊತೆಯಿದ್ದಾಗ ಮಣಿಯಮ್ಮ ತನ್ನ ಪತಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದಿದ್ದಾಳೆ. ಈ ಹಿನ್ನೆಲೆಯಲ್ಲಿ ಮಣಿಯಮ್ಮ ಹಾಗೂ ಸಿದ್ಧರಾಜು ಕಬಿನಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


