ಬೆಂಗಳೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಟ್ವೀಟ್ ಮಾಡಿ ಸಮ್ಮಿಶ್ರ ಸರ್ಕಾರಕ್ಕೆ ಶುಭ ಹಾರೈಸಿದ್ದಾರೆ.ಅಧಿಕಾರಕ್ಕಾಗಿ ಮೈತ್ರಿ ಮಾಡ್ಕೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆಯ ಕೊರತೆ ಇದ್ರೂ ದೋಸ್ತಿ ಸರ್ಕಾರ ತೆವಳಿಕೊಂಡೇ ಶತದಿನೋತ್ಸವ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ದೇವೇಗೌಡ ಅವರು ಟ್ವಿಟ್ಟರ್ ನಲ್ಲಿ ಶುಭಾಶಯ ಕೋರಿದ್ದಾರೆ.ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಶತದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಮೈತ್ರಿಕೂಟದಲ್ಲಿರುವ ಸಚಿವರು ಹಾಗೂ ಶಾಸಕರೆಲ್ಲರಿಗೂ ಶುಭ ಕೋರುತ್ತೇನೆ. ಈ ಸರ್ಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲೆಂದು ಹಾರೈಸುತ್ತೇನೆ ಎಂದು ಟ್ಟೀಟ್ ಮಾಡಿದ್ದಾರೆ.ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿಕೂಟ ಸರಕಾರ ಶತದಿನಗಳನ್ನು ಪೂರೈಸಿದೆ.ಈ ಸಂದರ್ಭದಲ್ಲಿ ಮೈತ್ರಿಕೂಟದಲ್ಲಿರುವ ಸಚಿವರು ಹಾಗೂ ಶಾಸಕರೆಲ್ಲರಿಗೂ ಶುಭ ಕೋರುತ್ತೇನೆ. ಈ ಸರಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲೆಂದು ಹಾರೈಸುತ್ತೇನೆ.— H D Devegowda (@H_D_Devegowda) August 30, 2018ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


