ಯಾದಗಿರಿ: ಸ್ಥಳೀಯ ಚುನವಾಣೆಗೂ ಮುನ್ನ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಸುರಪುರ ಪಟ್ಟಣದ ರಂಗಂಪೇಟೆ ಬಳಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.ಗುರುವಾರ ಸಂಜೆ ಸುರಪುರ ಪಟ್ಟಣದ ವಡ್ಡರ ಓಣಿಯ ವಾರ್ಡ್ ನಂಬರ್ 28 ಬಳಿ ಪ್ರಚಾರಕ್ಕೆ ಬಿಜೆಪಿಯವರು ತೆರಳಿದ್ದರು. ಆಗ ಕೆಲವರು ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಬಳಿಕ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಎಸ್‍ಪಿ ಯಡಾ ಮಾರ್ಟಿನ್, ಗುಂಪನ್ನು ಚದುರಿದ್ದಾರೆ. ಸುರಪುರ ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.ವಿಧಾನಸಭಾ ಚುನಾವಣೆ ಮುನ್ನವೂ ಸುರಪುರ ಪಟ್ಟಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳವಾಗಿತ್ತು. ಈಗ ಇದು ಮರುಕಳಿಸಿದ್ದು, ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


