ಬೆಂಗಳೂರು: ರೂಮಿನಲ್ಲಿ ನೇಣು ಬಿಗಿದು ಕೊಂಡು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರದ ಕೆಂಚೇನಹಳ್ಳಿಯಲ್ಲಿ ನಡೆದಿದೆ.ಭೂಮಿಕ ಆತ್ಮಹತ್ಯೆಗೆ ಶರಣಾದ ಯುವತಿ. ಬುಧವಾರ ಮನೆಯಲ್ಲಿ ತನ್ನ ಕೊಠಡಿಯ ಡೋರ್ ಲಾಕ್ ಮಾಡಿಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ. ರಾತ್ರಿ ಊಟಕ್ಕೆ ತಂದೆ-ತಾಯಿ ಎಷ್ಟು ಕರೆದರೂ ಭೂಮಿಕ ರೂಮಿನಿಂದ ಹೊರ ಬಂದಿರಲ್ಲಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ರೂಮಿನ ಬಾಗಿಲನ್ನು ಒಡೆದು ನೋಡಿದಾಗ, ಭೂಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಯುವತಿಯು ದಯಾನಂದ್ ಸಾಗರ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲೇ ಇದ್ದಳು. ಆತ್ಮಹತ್ಯೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.ಘಟನೆ ಸಂಬಂಧ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


