ಬಳ್ಳಾರಿ: ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಪೊಲೀಸರೇ ಆತನಿಂದಲೇ ಹಣ ಪಡೆದು ನ್ಯಾಯಾಲಯಕ್ಕೆ ಮೋಸ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ನಗರದ ಹನುಮಂತ ಎನ್ನುವ ಆರೋಪಿಗೆ ಮಟ್ಕಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಆದರೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಪೊಲೀಸರು ಆರೋಪಿ ಹನುಮಂತ ಊರಿನಲ್ಲಿ ಇಲ್ಲ ಅಂತಾ ನ್ಯಾಯಾಲಯಕ್ಕೆ ಹೇಳಲು ಆತನಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿವೆ.ನ್ಯಾಯಾಲಯದ ಆವರಣದಲ್ಲೆ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯ ಪೇದೆಗಳಾದ ಶ್ರೀನಿವಾಸ್ ಹಾಗೂ ಮುಜೀಬ್ ಎಂಬವರು ಆರೋಪಿಯಿಂದ ನ್ಯಾಯಾಲಯದ ಆವರಣದಲ್ಲೆ ಹಣ ಪಡೆದಿದ್ದಾರೆ. ಈ ಎಲ್ಲ ದೃಶ್ಯಗಳು ಮೊಬೈಲಿನಲ್ಲಿ ಸೆರೆಯಾಗಿವೆ.ಆರೋಪಿ ಹನುಮಂತ ನಿಂದ ನ್ಯಾಯಲಯದ ಆವರಣದಲ್ಲಿ ಎರಡು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸ್ ಪೇದೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೇದೆಗಳ ವಿರುದ್ಧ ಹಿರಿಯ ಅಧಿಕಾರಿಗಳು ಎನೂ ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಇದೀಗ ಕುತೂಹಲ ಮೂಡಿಸಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


