ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗಿದ್ದರಿಂದ ಹಾವೇರಿಗೆ ಪ್ರಚಾರಕ್ಕೆ ಬಂದಿದ್ದೇನೆ ಹೊರತು ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಗೊಂದಲವನ್ನು ಉಂಟುಮಾಡಿದೆ. ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದಾರೆ. ಆದ್ರೆ ಅವರೇನು ಕುಮಾರಸ್ವಾಮಿ ಸರ್ಕಾರ ಬೀಳಿಸಿ ಸಿಎಂ ಆಗ್ತಿನಿ ಅಂದಿಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನು ಓದಿ:  ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರು, ಯಾವತ್ತಿದ್ದರೂ ಅವರೇ ನಮ್ಮ ನಾಯಕರು. ಅವರ ಯೂರೋಪ್ ಪ್ರವಾಸ ಪೂರ್ವ ನಿಗದಿಯಾಗಿದ್ದು, ಅದರೆಲ್ಲೇನು ವಿಶೇಷತೆ ಇಲ್ಲ. ಅವರ ಜೊತೆ ಸಚಿವರು ಹೋಗುವ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಕರೆದರೆ ನಾನು ಹೋಗುತ್ತಿದ್ದೆ. ಆದರೆ ನನ್ನ ಕರೆದಿಲ್ಲ ಹೀಗಾಗಿ ನಾನು ಹೋಗುತ್ತಿಲ್ಲ ಎಂದು ತಿಳಿಸಿದರು.ಇದನ್ನು ಓದಿ:ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


