ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಚಾರ್ಮಾಡಿ ಘಾಟಿನಲ್ಲಿ ವೋಲ್ವೋ ಬಸ್ ಕೆಟ್ಟು ನಿಂತ ಪರಿಣಾಮ ಸಂಚಾರ ಬಂದ್ ಆಗಿದೆ. ಮಧ್ಯರಾತ್ರಿ 12ರಿಂದ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ಚಾರ್ಮಾಡಿಯಿಂದ ಅಣ್ಣಪ್ಪಸ್ವಾಮಿ ದೇವಾಲಯದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ.ವಾಹನಗಳು ಸುಮಾರು 10 ಕಿ.ಮೀ ಸಾಲುಗಟ್ಟಿ ನಿಂತಿದ್ದು, ಚಾರ್ಮಾಡಿಯಲ್ಲಿ ಭಾರೀ ವಾಹನಗಳ ನಿಷೇಧವಿದ್ದರೂ, ಘನ ವಾಹನಗಳು ಸಂಚರಿಸುತ್ತಿದೆ. ಕಳಸ-ಕುದುರೆಮುಖ ರಾಜ್ಯ ಹೆದ್ದಾರಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೂ ಭಾರೀ ವಾಹನಗಳು ಚಾರ್ಮಾಡಿ ಘಾಟಿನಲ್ಲಿ ಸಂಚಾರ ಮಾಡುತ್ತಿದೆ.ಕೆಲವು ದಿನಗಳ ಹಿಂದೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, 5 ಕಿ.ಮೀ ವರೆಗೂ ವಾಹನಗಳು ಸಾಲು ಗಟ್ಟಿ ನಿಂತಿತ್ತು. ಲಾರಿ ಕೆಟ್ಟು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ಕೊಟ್ಟಿಗೆಹಾರದ ಬಳಿ ವಾಹನಗಳು ವಾಪಸ್ ತೆರಳಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


