ಕೊಪ್ಪಳ: ಬಿಜೆಪಿಯವರಿಗ ಸುಳ್ಳೆ ಮನೆ ದೇವರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಮತ್ತು ಕನಕಗಿರಿಯಲ್ಲಿ ಕಾಂಗ್ರೆಸ್ ಸೋಲಿಗೆ ಬಿಜೆಪಿ ಸುಳ್ಳುಗಳೇ ಕಾರಣ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದೇ ಕೆಲಸವಾಗಿದೆ. ಕೆಳ ಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೂ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಒಳ್ಳೆಯ ನಾಯಕೆಂದು ನಾವು ಒಪ್ಪಿಕೊಳ್ಳುತ್ತೇವೆ. ವಾಜಪೇಯಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಓರ್ವ ಬಿಜೆಪಿ ನಾಯಕನು ಹೋಗಿ ಯೋಗ ಕ್ಷೇಮ ವಿಚಾರಿಸಲಿಲ್ಲ. ಇಂದು ಅವರ ಚಿತಾಭಸ್ಮ ಇಟ್ಟುಕೊಂಡು ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.ಮಾಜಿ ಸಿಎಂ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯೋದರ ಮೂಲಕ ಸಿದ್ದರಾಮಯ್ಯನವರು ಸಿಎಂ ಆಗಲಿದ್ದಾರೆ. ಹಾಸನದಲ್ಲಿ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗ್ತಿದ್ದು, ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


