ಬೆಂಗಳೂರು: ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ರ‍್ಯಾಪರ್ ಸಿಂಗರ್, ಸಂಗೀತ ನಿರ್ದೇಶಕ ಹಾಗೂ ಬಿಗ್‍ಬಾಸ್ ಖ್ಯಾತಿಯ ಚಂದನ್ ಶೆಟ್ಟಿಗೆ ಬಂಧನ ಭೀತಿ ಎದುರಾಗಿದೆ.ಹೌದು, ಇತ್ತೀಚೆಗೆ ಬಿಡುಗಡೆಯಾದ ರ‍್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆಯ ಅಂತ್ಯ ಸಿನಿಮಾದ “ಗಾಂಜಾ ಕಿಕ್” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಆದರೆ ಗಾಂಜಾ ಕಿಕ್ ಹಾಡಿನಲ್ಲಿ ಮಾದಕ ವಸ್ತುಗಳನ್ನು ಸೇವಿಸುವ ಕುರಿತು ವೈಭವಿಕರಿಸಿ ತೋರಿಸಲಾಗಿದೆ. ಹೀಗಾಗಿ ಖುದ್ದು ಸ್ವಯಂ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತರಾದ ಟಿ. ಸುನೀಲ್ ಕುಮಾರ್, ಮಾದಕ ವಸ್ತುಗಳ ಸೇವನೆ ಪ್ರಚೋದನೆಗೆ ಸಂಬಂಧಪಟ್ಟಂತೆ ರ‍್ಯಾಪರ್ ಚಂದನ್ ಶೆಟ್ಟಿಗೆ ನೋಟಿಸ್ ನೀಡಿದ್ದು, ಅವರು ಮಾದಕ ವಸ್ತುಗಳ ಸೇವನೆಗೆ ಪ್ರಚೋದಿಸುವಂತಹ ಹಾಡನ್ನು ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


