ಬೆಂಗಳೂರು: ನಗರದಲ್ಲಿರುವ ಮಹಾರಾಣಿ ಕಾಲೇಜ್ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಶೃತಿ(21) ನೇಣಿಗೆ ಶರಣಾದ ಯುವತಿ. ಶೃತಿ ಮೂಲತಃ ಕೋಲಾರದ ಶ್ರೀನಿವಾಸ್ ಪುರದವಳಾಗಿದ್ದು, ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಬಿಎ ಕೊನೆ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಸಾಲು ಹಬ್ಬಗಳು ಬಂದ ಹಿನ್ನೆಲೆಯಲ್ಲಿ ರಜೆಗಳು ಇದ್ದುದರಿಂದ ವಿದ್ಯಾರ್ಥಿನಿಯರು ತಮ್ಮ ಊರುಗಳಿಗೆ ತೆರಳಿದ್ದರು. ಹೀಗಾಗಿ ಹಾಸ್ಟೆಲ್ ನಲ್ಲಿ ಯಾರು ಇಲ್ಲದ ವೇಳೆ ಶೃತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗ್ಗೆ ತಿಂಡಿಗೆ ಬರದೇ ಇದ್ದುದನ್ನು ಗಮನಿಸಿದ ಉಳಿದ ವಿದ್ಯಾರ್ಥಿನಿಯರು ರೂಂಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಈ ಬಗ್ಗೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


