ಕೊಪ್ಪಳ: ಇಲ್ಲಿನ ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೆ ಬಾಯಿ ಹರಿಬಿಟ್ಟಿದ್ದಾರೆ. ನೀವು ಡಬಲ್ ಗೇಮ್ ಆಡುತ್ತಿದ್ದೀರಿ ಎಂದ ವ್ಯಕ್ತಿಯನ್ನು ಸಾರ್ವಜನಿಕವಾಗಿಯೇ ನಿಂದಿಸಿದ್ದು, ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಗಂಗಾವತಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕನೇ ವಾರ್ಡ್ ನಲ್ಲಿ ಪ್ರಚಾರದ ವೇಳೆ ಅನ್ಸಾರಿ ಗೂಂಡಾಗಿರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಚಾರದ ವೇಳೆ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಭಾಷಣಕ್ಕೆ ಅಡ್ಡಿಪಡಿಸಿದ ವ್ಯಕ್ತಿಗೆ ಹೋಗಲೇ ನನ್ನ ಮಗನೆ ಎಂದು ನಿಂದಿಸಿದ್ದಾರೆ. ಅಲ್ಲದೇ ಆ ನನ್ನ ಮಗನಿಗೆ ಒದಿರಲೇ ಎಂದು ಸಾರ್ವಜನಿಕವಾಗಿಯೇ ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಅರ್ಜುನ್ ನಾಯಕ ಪರ ಪ್ರಚಾರ ಮಾಡುವ ವೇಳೆ ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


