ಬೆಂಗಳೂರು: ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಸಿ.ಕೆ ಪಾಳ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯೊಬ್ಬರ ಶವ ಪತ್ತೆಯಾಗಿದೆ.ಅಸ್ಸಾಂ ಮೂಲದ ಸೋನಾಥೋನ್(18) ಮೃತ ವಿವಾಹಿತೆ. ಈಕೆಗೆ ಕಳೆದ ತಿಂಗಳಷ್ಟೇ ಮದುವೆಯಾಗಿತ್ತು. ಇದೀಗ ಆಕೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಮನೆಯ ಹೊರಗಡೆ ಕಬ್ಬಿಣದ ಮೆಟ್ಟಿಲುಗಳಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೀತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಿಂದ ಮನನೊಂದು ಶನಿವಾರ ರಾತ್ರಿ ಎಲ್ಲರೂ ಮಲಗಿದ ನಂತರ ಮನೆಯಿಂದ ಹೊರಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.ಆದ್ರೆ ಸೋನೋಥಾನ್ ಸಾವಿಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


