ಬಳ್ಳಾರಿ: ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಕೌಲಬಜಾರ್ ಪ್ರದೇಶದಲ್ಲಿ ನಡೆದಿದೆ.ಹೇಮಲತಾ ಹಾಗೂ ದರ್ಶನ್ ಮೃತ ದುರ್ದೈವಿಗಳು. ಶನಿವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಹಾಗೂ ಮಗನ ಮೇಲೆ ಏಕಾಏಕಿ ಮನೆಯ ಮೇಲ್ಛಾವಣೆ ಕುಸಿದು ಬಿದ್ದಿದೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಅಸುನೀಗಿದ್ದಾರೆ. ಇಂದು ಬೆಳಗ್ಗೆ ಮನೆ ಕುಸಿದಿರುವುದನ್ನು ಕಂಡ ಸ್ಥಳೀಯರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶೀಲನೆ ನಡೆಸಿ, ಮನೆಯು ತುಂಬಾ ಹಳೆಯದಾಗಿದ್ದರಿಂದ ಕುಸಿದು ಬಿದ್ದಿದೆ ಎಂದು ತಿಳಿಸಿದ್ದಾರೆ. ಘಟನೆ ಸಂಬಂಧ ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


