ಕೋಲಾರ: ಕೋತಿಯೊಂದು ದಾಳಿ ಮಾಡಿದ ಪರಿಣಾಮ 5 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.ಕೋಲಾರ ತಾಲೂಕಿನ ವೇಮಗಲ್ ಸಮೀಪದ ಕಲ್ವಮಂಜಲಿ ಗ್ರಾಮದಲ್ಲಿ ಈ ಗಟನೆ ನಡೆದಿದ್ದು, ನಿಶಾಂತ್ (5) ಗಂಭೀರವಾಗಿ ಗಾಯಗೊಂಡ ಪುಟಾಣಿ. ನಿಶಾಂತ್ ಅಂಗಡಿಯಿಂದ ತಿಂಡಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕೋತಿ ಏಕಾಏಕಿ ಆತನ ಮೇಲೆ ದಾಳಿ ನಡೆಸಿದೆ.ಘಟನೆಯಿಂದ ಗಂಭೀರ ಗಾಯಗೊಂಡ ನಿಶಾಂತ್ ನನ್ನು ಕೂಡಲೇ ಗ್ರಾಮಸ್ಥರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ.ವೇಮಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


